ಬೆಂದ್ರೆ ಕುರಿತ ಸಾಕ್ಷ್ಯಚಿತ್ರದ ಬಗ್ಗೆ ಪುಟ್ರದಾಗಿ ಬರೆದಿರುವವರು ಕಾರ್ತಿಕ್ ಪರಾಡ್ಕರ್ ತಮ್ಮ ಬ್ಲಾಗ್ ನಲ್ಲಿ. ಅದನ್ನಿಲ್ಲಿ ಪ್ರಕಟಿಸಲಾಗಿದೆ. ಇದೇ ರೀತಿ ಒಳ್ಳೊಳ್ಳೆ ಡಾಕ್ಯುಮೆಂಟರಿಗಳ ಕುರಿತು ತಮ್ಮಲ್ಲಿ ಮಾಹಿತಿ ಇದ್ದರೆ ನಮಗೆ ಕಳಿಸಬಹುದು.

ದ.ರಾ.ಬೇಂದ್ರೆ ಕುರಿತು ಗಿರೀಶ್ ಕಾರ್ನಾಡ್ ನಿರ್ಮಿಸಿದ ಸಾಕ್ಷ್ಯಚಿತ್ರ ಇವತ್ತಿಗೂ ನೆನಪಾದಾಗ ಪುಳಕವಾಗುತ್ತದೆ..

ಸಾಕ್ಷ್ಯಚಿತ್ರವೊಂದನ್ನು ಅದೆಷ್ಟು ಆತ್ಮೀಯವಾಗಿ ತೆರೆಯ ಮೇಲೆ ತೆರೆದಿಡಬಹುದು ಎನ್ನುವುದನ್ನು ತೋರಿಸಿಕೊಡುತ್ತದೆ ಅವರ ಪ್ರಯತ್ನ. ಕಪ್ಪು-ಬಿಳುಪಿನ ಬಣ್ಣಗಳಲ್ಲಿ ಕವಿಯ ಅತೀ ಚಿಕ್ಕ ವಿವರವನ್ನೂ ಕೂಡಾ ಅವರು ದಾಖಲಿಸುತ್ತಾರೆ (ಉದಾ: ದ.ರಾ. ಬೇಂದ್ರೆ ಯಾವಾಗಲೂ ತಮ್ಮ ಕೋಣೆಯಲ್ಲಿ ಪುಸ್ತಕಗಳನ್ನು ಹರಡಿಕೊಂಡಿರುತ್ತಿದ್ದದ್ದು).

ಧಾರವಾಡದ ಹಾದಿಗಳಲ್ಲಿ ಬೇಂದ್ರೆ ಸಾಗುತ್ತಿದ್ದರೆ ನೋಡುಗನಿಗೆ ರೋಮಾಂಚನ. ಅವರ ನಡಿಗೆ, ಕೊಡೆ, ಮಳೆ, ಹಣ್ಣು ಮಾರುವವರ ಜೊತೆ ಒಡನಾಡುವ ರೀತಿ ಎಲ್ಲವನ್ನು ಯಾವುದೇ ಕ್ರತ್ರಿಮತೆ ಇಲ್ಲದೆ ಗಿರೀಶ್ ಕಾರ್ನಾಡ್ ದ್ರಶ್ಯದಲ್ಲಿ ದಾಖಲು ಮಾಡುತ್ತಾರೆ. ಈ ಸಾಕ್ಶ್ಯಚಿತ್ರದಲ್ಲಿರುವ ಕೆಲವೊಂದು ಶಾಟ್ ಗಳು ವಾರೆವ್ವಾ ಎನ್ನುವಂತಿವೆ. ಸಾಕ್ಶ್ಯಚಿತ್ರಗಳ ನಿರ್ಮಾಣದ ಬಗ್ಗೆ ಆಸಕ್ತಿ ಇರುವವರು ಇದನ್ನು ತಪ್ಪದೇ ನೋಡಬೇಕು..

ಇದೆಲ್ಲಕ್ಕಿಂತ ಹೆಚ್ಚಾಗಿ ಈ ಸಾಕ್ಷ್ಯಚಿತ್ರದಲ್ಲಿ ನಮ್ಮೆಲ್ಲರನ್ನು ಪುಳಕಿತರನ್ನಾಗಿ ಮಾಡುವ ಅಂಶವೊಂದಿದೆ. ಸ್ವತಃ ದ.ರಾ. ಬೇಂದ್ರೆ ಇಲ್ಲಿ ತಮ್ಮ ” ವಿಶ್ವಮಾತೆಯ ಗರ್ಭ ಕಮಲಜಾತ…” ಕವನವನ್ನು ವಾಚನ ಮಾಡಿದ್ದಾರೆ.

ಈಗಂತೂ ಕವನ ವಾಚನವೇ ಅಪರೂಪ. ಇಂತಹ ಸಂದರ್ಭದಲ್ಲಿ ಬೇಂದ್ರೆಯಂತಹ ಕವಿಯ ಸಾಲುಗಳನ್ನು ಅವರ ಬಾಯಲ್ಲಿ ಕೇಳಿ ಪಡೆದುಕೊಳ್ಳುವ ಸುಖಕ್ಕೆ ಸಾಟಿ ಯಾವುದಿದೆ ನೀವೇ ಹೇಳಿ. ಸಂಪರ್ಕ ಕೊಂಡಿ ನೋಡಿ